
ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಅವರನ್ನು ಆಯ್ಕೆ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಹಾಲಿ ಸಿಜೆಐ ಸಂಜೀವ್ ಖನ್ನಾ, ಮುಂದಿನ ಸಿಜೆಐ ಆಗಿ ನ್ಯಾ.ಬಿ.ಆರ್.ಗವಾಯಿ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
ಮೇ.13ರಂದು ಸಂಜೀವ್ ಖನ್ನಾ ಅಧಿಕಾರಾವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ನೂತನ ಸಿಜೆಐ ಆಗಿ ನ್ಯಾ,ಬಿ.ಆರ್.ಗವಾಯಿ ಹೆಸರನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಸಂಜೀವ್ ಖನ್ನಾ ಶಿಫಾರಸು ಮಾಡಿದ್ದಾರೆ. ಮೇ.14ರಂದು ಸುಪ್ರೀಂ ಕೋರ್ಟ್ ನ 52ನೇ ಸಿಜೆಐ ಆಗಿ ಬಿ.ಆರ್.ಗವಾಯಿ ಅಧಿಕಾರ ಸ್ವೀಕರಿಸಲಿದ್ದಾರೆ.