
ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋದಲ್ಲಿ ಪ್ರಯಾಣಿಕನೊಬ್ಬ ಯುವತಿಯೊಂದಿಗೆ ದುರ್ವರ್ತನೆ ತೋರಿರುವ ಘಟನೆ ಬೆಳಕಿಗೆ ಬಂದಿದೆ.
ರಾಜ್ಯ ರಾಜಧಾನಿ ಬೆಂಗಳುರಿನ ಜೀವನಾಡಿ ಎನ್ನಲಾಗುತ್ತಿರುವ ನಮ್ಮ ಮೆಟ್ರೋ ಮಹಿಳೆಯರಿಗೆ ಸುರಕ್ಷಿತವಾಗಿಲ್ಲವೇ ಎಂಬ ಪ್ರಶ್ನೆ ಆಗಾಗ ಮೂಡುತ್ತಲೇ ಇರುತ್ತವೆ. ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದಾನೆ.
ವಿಧಾನಸೌಧ ಮೆಟ್ರೋ ಸ್ಟೇಷನ್ ನಿಂದ ಮೆಟ್ರೋ ಹತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ. ತಕ್ಷಣ ಯುವತಿ ಮೆಟ್ರೋ ಭದ್ರತಾ ಸಿಬ್ಬಂದಿಗೆ ದೂರು ನೀಡಿದ್ದಾಳೆ. ವ್ಯಕ್ತಿಯನ್ನು ಹಿಡಿದ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಬೈದು ಬುದ್ಧಿ ಹೇಳಿದ್ದಾರೆ.

