Kannada NewsKarnataka NewsLatest
*ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಪ್ರಯಾಣಿಕ ಆತ್ಮಹತ್ಯೆಗೆ ಯತ್ನ: ರೈಲಿನಡಿ ಸಿಲುಕಿರುವ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕನೊಬ್ಬ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಮೆಟ್ರೋ ನಿಲ್ದಾಣದ ಮೂರನೇ ಪ್ಲಾಟ್ ಫಾರಂ ನಲ್ಲಿ ಪ್ರಯಾಣಿಕನೊಬ್ಬ ಏಕಾಏಕಿ ಮೆಟ್ರೋ ಟ್ರ್ಯಾಕ್ ಗೆ ಜಿಗಿದಿದ್ದು, ಮೆಟ್ರೋ ರೈಲಿನಡಿ ಸಿಲುಕಿಕೊಂಡಿದ್ದಾನೆ. ಮಾದವಾರ- ರೇಷ್ಮೇ ಸಂಸ್ಥೆ ನಡುವಿನ ಹಸಿರು ಮಾರ್ಗದ ಮೆಟ್ರೋ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದೆ.
ಸದ್ಯ ಈ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ರೈಲಿನಡಿ ಸಿಲುಕಿರುವ ಪ್ರಯಾಣಿಕನ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.