ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗರ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಕಿರಿಕಿರಿಯುಂಟುಮಾಡುವವರ ಹಾಗೂ ಕಿರುಕುಳ ನೀಡುತ್ತಿರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೆಟ್ರೋದಲ್ಲಿ ಯುವತಿಯರ ಫೋಟೋ ಕ್ಲಿಕ್ಕಿಸಿ, ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಹೇಶ್ ಬಂಧಿತ ಆರೋಪಿ. ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್. ಪ್ರಯಾಣಿಕರಂತೆ ಮೆಟ್ರೋದಲ್ಲಿ ತೆರಳುತ್ತಿದ್ದ ಈತ ಮಹಿಳೆಯರು, ಯುವತಿಯರ ಅಂಗಾಂಗಗಳ ಫೋಟೋ, ವಿಡಿಯೋಗಳನ್ನು ಕ್ಲಿಕ್ಕಿಸುತ್ತಿದ್ದ. ಯುವತಿಯಿಬ್ಬರ ದೂರಿನ ಮೇರೆಗೆ ಮೆಟ್ರೋ ಸೆಕ್ಯೂರಿಟಿ ಗಾರ್ಡ್ ಗಳು ಆರೋಪಿಯನ್ನು ಬಂಧಿಸಿದ್ದಾರೆ.
ಬಳಿಕ ಜಯನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಮಹಿಳಾ ಪ್ರಯಾಣಿಕರ ಫೋಟೋ, ವಿಡಿಯೋಗಳು ಪತ್ತೆಯಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ