Kannada NewsKarnataka NewsLatest

*ನಮ್ಮ ಮೆಟ್ರೋ ಸಂಚಾರದಲ್ಲಿ ಈ ಮಾರ್ಗದಲ್ಲಿ ಸಮಯ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೆಟ್ರೋ ಪ್ರಯಾಣಿಕರ ಗಮನಕ್ಕೆ ಮಹತ್ವದ ಪ್ರಕಟಣೆಯನ್ನು ಬಿಎಂ ಆರ್ ಸಿ ಎಲ್ ಹೊರಡಿಸಿದೆ. ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಲ ದಿನಗಳ ಕಾಲ ಸಂಚಾರ ಸಮಯ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಆಗಸ್ಟ್ 17, 20, 23, 24 ಹಾಗೂ 29ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಮಯ ಬದಲಾವಣೆ ಮಾಡಲಾಗಿದೆ.

Home add -Advt

ಕೆಂಗೇರಿ, ಚೆಲ್ಲಘಟ್ಟ ಹಾಗೂ ಬೈಯ್ಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆಗಸ್ಟ್ 17ರಂದು ಕೆಂಗೇರಿ ಹಾಗೂ ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 5ರಿಂದ ರಾತ್ರಿ 11ರವರೆಗೆ ಮೆಟ್ರೋ ಸೇವೆ ಲಭ್ಯವಿರಲಿದೆ.

ಆಗಸ್ಟ್ 23ರಂದು ಕೆಂಗೇರಿ ಹಾಗೂ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7 ಗಂಟೆಯವರೆಗೆ ಯಾವುದೇ ಮೆಟ್ರೋ ಸಚಾರವಿರುವುದಿಲ್ಲ. ಮೈಸೂರು ರಸ್ತೆ ಹಾಗೂ ಸ್ವಾಮಿ ವಿವೇಕಾನಂದ ನಿಲ್ದಾಣಗಳ ನಡುವೆ ಮಾತ್ರ ಈ ಅವಧಿಯಲ್ಲಿ ಮೆಟ್ರೋ ಸಂಚರಿಸಲಿದೆ. ಬಳಿಕ ಬೆಳಿಗ್ಗೆ 7 ಗಂಟೆಯಿಂದ ಎಂದಿನಂತೆ ಕೆಂಗೇರಿಯಿಂದ ಬೈಯ್ಯಪ್ಪನಹಳ್ಳಿ ನಿಲ್ದಾಣದ ನಡುವೆ ಮೆಟ್ರೋ ಸಂಚಾರವಿರಲಿದೆ.

ಆಗಸ್ಟ್ 20 ಹಾಗೂ 29ರಂದು ಬಯ್ಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ ಮಾರ್ಗಗಳ ನಡುವೆ ಬೆಳಿಗ್ಗೆ 7 ಗಂಟೆಯವರೆಗೆ ಯಾವುದೇ ರೈಲು ಸಂಚಾರವಿರುವುದಿಲ್ಲ. ಈ ಅವಧಿಯಲ್ಲಿ ಸ್ವಾಮಿ ವಿವೇವಾಕನಂದ ಮೆಟ್ರೋ ನಿಲ್ದಾಣದಿಂದ ಮಾತ್ರ ಮೆಟ್ರೋ ರೈಲು ಸಂಚಾರ ಲಭ್ಯವಿರುತ್ತದೆ.

ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ಮಾತ್ರ ವ್ಯತ್ಯವಾಗುತ್ತದೆ ಹೊರತು ಹಸಿರು ಮಾರ್ಗ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.

Related Articles

Back to top button