Kannada NewsKarnataka NewsLatest

*ನಮ್ಮ ಮೆಟ್ರೋದಲ್ಲಿ ಮತ್ತೊಂದು ಯುವತಿಗೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಹತ್ತಿದ್ದ 22 ವರ್ಷದ ಯುವತಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿ ಕಿರುಚುತ್ತಿದ್ದಂತೆ ಆರೋಪಿ ಮುಂದಿನ ನಿಲ್ದಾಣದಲ್ಲಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಯುವತಿ ಕಿರುಚುತ್ತಿದ್ದಂತೆ ತಕ್ಷಣ ಅಲರ್ಟ್ ಆದ ಮೆಟ್ರೋ ಭದ್ರತಾ ಸಿಬ್ಬಂದಿ ಆರೋಪಿಯನ್ನು ಹಿಡಿದಿದ್ದಾರೆ.

ಬಳಿಕ ಉಪ್ಪಾರಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಿಚಾರಣೆ ನಡೆಸಿದ್ದ ವೇಳೆ ಆತ ಈ ಹಿಂದೆ ಬಿಎಂಟಿಸಿ ಬಸ್ ಗಳಲ್ಲಿ ಯುವತಿಯರ ಮೊಬೈಲ್ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಆತನ ವಿರುದ್ಧ ಮೊಬೈಲ್ ಕಳ್ಳತನ ಪ್ರಕರಣ ಕೂಡ ದಾಖಲಾಗಿದೆ ಎಂಬುದು ಗೊತ್ತಾಗಿದೆ.

Home add -Advt

Related Articles

Back to top button