Kannada NewsKarnataka NewsLatest

*ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ನಿಲ್ದಾಣ ನಿಯಂತ್ರಕರ ಸಮಯ ಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಲಾಗಿದೆ. ಲೀಲಾವತಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಇಂದು ಮಧ್ಯಾಹ್ನ 12:30ರ ಸುಮಾರಿಗೆ ಮಹಿಳೆ ಮೆಟ್ರೋ ರೈಲು ಬತ್ರುತ್ತಿದ್ದಂತೆ ಮೆಟ್ರೋ ಹಳಿಗೆ ಜಿಗಿದ್ದಾಳೆ. ಕ್ಷಣಾರ್ಧದಲ್ಲಿ ನಿಲ್ದಾಣ ನಿಯಂತ್ರಕರು ಮಹಿಳೆಯನ್ನು ರಕ್ಷಿಸಿದ್ದಾರೆ.

ಸುರಕ್ಷತಾ ಕ್ರಮ ಅಳವಡಿಸಿ ಮಹಿಳೆಯನ್ನು ಮೆಟ್ರೋ ಹಳಿಯಿಂದ ಹೊರತೆಗೆಯಲಾಗಿದೆ. ಲೀಲಾವತಿ ಹೂವಿನ ವ್ಯಾಪಾರ ಮಾಡುತ್ತಿದ್ದರಂತೆ. ಸಾಲ ಮಾಡಿಕೊಂಡಿದ್ದರಂತೆ. ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button