Kannada NewsLatestNational

*ಮಳಿಗೆಯಲ್ಲಿ ಬೆಂಕಿ ಅವಘಡ: ಮಕ್ಕಳು ಸೇರಿ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮೂರು ಅಂತಸ್ತಿನ ಪೀಠೋಪಕರಣ ಮಳಿಗೆಯಲ್ಲಿ ಭೀಕರ ಅಗ್ನಿ ಅವಘಡ ಅಸ್ಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿದ್ದಾರೆ.

ತೆಲಂಗಾಣದ ನಾಂಪಲ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಮಳಿಗೆಯಲ್ಲಿದ್ದ ಪೀಠೋಪಕರಣ, ಕಚ್ಚಾ ವಸ್ತುಗಳು, ಬೆಡ್ ಸೇರಿದಂತೆ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಗಿವೆ.

Home add -Advt

ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು, ಓರ್ವ ವೃದ್ಧೆ ಸೇರಿ ಐವರು ಇದ್ದಾರೆ. ಮೃತದೇಹಗಳನ್ನು ಮಳಿಗೆಯ ನೆಲಮಾಳಿಗೆಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಳಿಗೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Related Articles

Back to top button