
ಪ್ರಗತಿವಾಹಿನಿ ಸುದ್ದಿ: ನಂದಿಗಿರಿಧಾಮದಲ್ಲಿ ನಾಳೆ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಕೊನೇಕ್ಷಣದಲ್ಲಿ ರದ್ದಾಗಿದೆ.
ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಾಳೆ ಸಂಜೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಈ ನಿಟ್ತಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರದಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದಾಗಿದೆ.
ನಾಳೆ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿಯೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




