Belagavi NewsBelgaum News
*ನಂದಿಹಳ್ಳಿ -ಗರ್ಲಗುಂಜಿ ಸಂಪರ್ಕ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ್ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ನಂದಿಹಳ್ಳಿ ಗ್ರಾಮದಿಂದ ಗರ್ಲಗುಂಜಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಬುಧವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ ಮಂಜೂರಾಗಿದ್ದು, ಸುಮಾರು 3 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸ್ಥಳೀಯರ ಸಲಹೆ ಪಡೆದು, ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
ಈ ಸಂದರ್ಭದಲ್ಲಿ ಯುವರಾಜ ಕದಂ, ಸಿ.ಸಿ.ಪಾಟೀಲ, ಮಹಾದೇವ ಜಾಧವ್, ಸಂಜು ಮಾದರ್, ಮಲ್ಲಿಕಾರ್ಜುನ ಲೋಕೂರ್ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ