Karnataka NewsLatest

*ಪ್ರವಾಸಿಗರ ಗಮನಕ್ಕೆ: ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಂದಿಬೆಟ್ಟ ಹಾಗೂ ಸ್ಕಂದಗಿರಿಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ನಂದಿ ಗಿರಿಧಾಮ, ಸ್ಕಂದಗಿರಿ ಹಾಗೂ ಸುತ್ತಮುತ್ತಲ ಪ್ರವಾಸಿ ತಾಣಗಳಿಗೆ ನಾಳೆ ಮುಂಜಾನೆವರೆಗೂ ನಿರ್ಬಂಧ ವಿಧಿಸಲಾಗಿದೆ. ನಂದಿಗಿರಿಧಾಮದಲ್ಲಿರುವ ವಸತಿ ಕೊಠಡಿಗಳ ಕಾಯ್ದಿರಿಸುವಿಕೆಯನ್ನೂ ನಿಷೇಧಿಸಲಾಗಿದೆ.

ಅಲ್ಲದೇ ನಂದಿ ಗ್ರಾಮದ ಭೋಗನಂದೀಶ್ವರ ದೇಗುಲಕ್ಕೆ ಇಂದು ಮಧ್ಯಾಹ್ನ 2 ಗಂಟೆಯವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ನಂದಿಗಿರಿಧಾಮದಲ್ಲಿ ಇದೇ ಮೊದಲ ಬಾರಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರಲ್ಲಿ ಅಭಿವೃದ್ಧಿ ವಿಚಾರವಾಗಿ ಭಾರಿ ನಿರೀಕ್ಷೆ ಹೆಚ್ಚಿದೆ.

Home add -Advt

Related Articles

Back to top button