
ಪ್ರಗತಿವಾಹಿನಿ ಸುದ್ದಿ: ನಕಲಿ ನಂದಿನಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಂದಿನಿ ತುಪ್ಪದ ಹೆಸರಲ್ಲಿ ನಕಲಿ ತುಪ್ಪ ತಯಾರಿಸಿ ನಂದಿನಿ ಪಾರ್ಕರ್ ಗಳಿಗೆ ಪೂರೈಸುತ್ತಿದ್ದರು. ತಮಿಳುನಾಡು, ಕೇರಳ ಗಳಿಗೂ ಮಾರಾಟ ಮಾಡುತ್ತಿದ್ದರು. ಕೆಲ ದಿಬಗಲ ಹಿಂದೆ ಈ ಪ್ರಕರಣದಲ್ಲಿ ಕೆ ಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ ಸೇರಿದಂತೆ ಕೆಲ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಇದೀಗ ಪ್ರಮುಖ ಆರೋಪಿ ದಂಪತಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶಿವಕುಮಾರ್ ಹಾಗೂ ಪತ್ನಿ ರಮ್ಯಾ ಎಂದು ಗುರುತಿಸಲಾಗಿದೆ. ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕ ಹೊಂದಿದ್ದರು. ನಕಲಿ ತುಪ್ಪ ತಯಾರಿ, ನಂದಿನಿ ತುಪ್ಪದ ಜೊತೆ ಕಲಬೆರಕೆ ಮಾಡಿ ಪ್ಯಾಕೆಟ್ ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ನಂದಿನಿ ತುಪ್ಪದ ಲೇಬಲ್ ಅಂಟಿಸಿ ಮಾರಾಟ ಮಾಡುತ್ತಿದ್ದರು. ಸದ್ಯ 1.50 ಕೋಟಿ ಮೌಲ್ಯದ 8 ಸಾವಿರ ಲೀಟರ್ ನಕಲಿ ತುಪ್ಪ ಜಪ್ತಿ ಮಾಡಲಾಗಿದೆ.


