
ಪ್ರಗತಿವಾಹಿನಿ ಸುದ್ದಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಾಜಕೀಯ ಕೆಸರೆರಚಾಟ ಆರಂಭವಾಗಿದ್ದು, ಎಚ್ಚೆತ್ತ ರಾಜ್ಯ ಸರ್ಕಾರ ಕರ್ನಾಟಕದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸುತ್ತೋಲೆ ಹೊರಡಿಸಿದೆ.
ಮುಜರಾಯಿ ಇಲಾಖೆ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಮುಜರಾಯಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದ ದೇವಾಲಯಗಳಲ್ಲಿ ನಂದಿನಿ ತುಪ್ಪವನ್ನೇ ಕಡ್ಡಾಯವಾಗಿ ಬಳಸುವಂತೆ ತಿಳಿಸಲಾಗಿದೆ.
ದೇವಸ್ಥಾನದ ಸೇವೆ, ದೀಪಗಳು, ಪ್ರಸಾದ ತಯಾರಿಕೆ, ದಾಸೋಹ ಭವನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ