Latest

ಸಿದ್ದರಾಮಯ್ಯ ಓರ್ವ ಹುಚ್ಚ; ಮಾಜಿ ಸಿಎಂ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಕೆ.ಎಸ್.ಈಶ್ವರಪ್ಪ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಆರ್ ಎಸ್ ಎಸ್ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ ಓರ್ವ ಹುಚ್ಚ. ಅದಕ್ಕೆ ಮನಬಂದಂತೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ನೀವು ಆರ್.ಎಸ್.ಎಸ್ ಚಡ್ಡಿಗೆ ಬೆಂಕಿ ಹಚ್ಚುವುದಾಗಿ ಹೇಳಿದ್ದೀರಾ…ಸಂಘದ ತಂಟೆಗೆ ಬಂದರೆ ಹುಷಾರ್. ಸಿದ್ದರಾಮಯ್ಯ ಹುಚ್ಚ. ಅವರ ಮಾತಿಗೆ ರಸ್ತೆಯಲ್ಲಿ ಹೋಗುವ ನಾಯಿಯೂ ಗೌರವ ಕೊಡಲ್ಲ ಎಂದು ಹಿಗ್ಗಾ ಮುಗ್ಗಾ ಕಿಡಿಕಾರಿದ್ದಾರೆ.

ಹನುಮನ ಬಾಲಕ್ಕೆ ರಾವಣ ಬೆಂಕಿ ಹಚ್ಚಿದ, ಇಡೀ ಲಂಕೆಯೇ ಸುಟ್ಟು ಹೋಯಿತು….. ಕಾಂಗ್ರೇಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ … ಆ ಕೆಲಸ ನಿಮಗಿಂತ ಚನ್ನಾಗಿ ಇನ್ಯಾರು ಮಾಡಲು ಸಾಧ್ಯ …. ನೀವು ಆರ್ ಎಸ್ ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೂದಿಯಾಗುತ್ತೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯನವರಿಗೆ ಸೋನಿಯಾ ಗಾಂಧಿ ಬುದ್ಧಿ ಹೇಳಿದ್ದಾಯ್ತು ಆದರೂ ಕೇಳುತ್ತಿಲ್ಲ, ಇನ್ನು ರಾಹುಲ್ ಗಾಂಧಿ ಹೇಳುವ ಮತ್ಟದಲ್ಲೇ ಇಲ್ಲ, ಡಿ.ಕೆ.ಶಿವಕುಮಾರ್ ಗೆ ಹೇಳುವ ಶಕ್ತಿಯೂ ಇಲ್ಲ, ಖರ್ಗೆಯವರು ಈ ನಿಟ್ಟಿನಲ್ಲಿ ಪ್ರಯತ್ನ ಮಾಡಿದರೂ ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ಬಾಯಿಮುಚ್ಚಿಸಲು ಆಗಲ್ಲ. ಹಾಗಾಗಿ ಬಾಯಿಗೆ ಬಂದಂತೆ ಮಾತುಗಳನ್ನಾಡುತ್ತಾ ಓಡಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಹೋದರರ ನಡುವೆ ಜಗಳ; ತಮ್ಮನನ್ನು ಗುಂಡಿಟ್ಟು ಹತ್ಯೆಗೈದ ಅಣ್ಣ

Home add -Advt

Related Articles

Back to top button