ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಶಾಸಕ ಕೆ.ವೈ.ನಂಜೇಗೌಡ ಸುಳಿವು ನೀಡಿದ್ದಾರೆ.
ಶೀಘ್ರದಲ್ಲಿಯೇ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಶಾಸಕ ನಂಜೇಗೌಡ ತಿಳಿಸಿದ್ದಾರೆ.
ನಂದಿನಿ ಹಾಲಿನಿ ದರ ಹೆಚ್ಚಿಸುವ ಸಂಬಂಧ ಕೆಲವು ದಿನಗಳ ಹಿಂದಿನಿಂದಲೇ ಚರ್ಚೆ ನಡೆಯುತ್ತಿದೆ. ಬೆಳಗಾವಿ ಅಧಿವೇಶನದ ಬಳಿಕ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ