Kannada NewsKarnataka NewsNationalPolitics

*ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ ಆರೋಪಿ ಎಂಎಲ್ಸಿ ಸೂರಜ್ ರೇವಣ್ಣನನ್ನು 8 ದಿನಗಳಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ಸೂರಜ್ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಬಗ್ಗೆ ಆದೇಶಿಸಿದೆ.

ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ವಿಚಾರಣೆಗೆ ಒಳಗಾಗಲಿದ್ದು, ಸೂರಜ್ ವಿರುದ್ಧ ಕೇಳಿ ಬಂದಿರುವ ಈ ಗಂಭೀರ ಆರೋಪ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ. ಯುವಕನಿಗೆ ಸೂರಜ್​​ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆಪಾದನೆ ಕೇಳಿಬಂದಿದ್ದು, ಈ ಪ್ರಕರಣವನ್ನು ಸಿಐಡಿ ತನಿಖೆಗೂ ರಾಜ್ಯ ಸರ್ಕಾರ ವಹಿಸಿತ್ತು. 

ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಳೆದ ಶನಿವಾರ ಪ್ರಕರಣ ದಾಖಲಾಗಿತ್ತು. ‘ಅಸ್ವಾಭಾವಿಕ ಅಪರಾಧಗಳು’ ಸೇರಿದಂತೆ ಸಂತ್ರಸ್ತಗೆ ಬೆದರಿಕೆ, ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸೂರಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Home add -Advt

Related Articles

Back to top button