ಪ್ರಗತಿವಾಹಿನಿ ಸುದ್ದಿ; ಮೈಸೂರು: ನಂಜನಗೂಡಿನಲ್ಲಿ ಪುರಾತನ ಹಿಂದೂ ದೇವಾಲಯವನ್ನು ತೆರವುಗೊಳಿಸಿದ ಜಿಲ್ಲಾಡಳಿತ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರದ ಕ್ರಮಕ್ಕೆ ಸ್ವತ: ಆರ್ ಎಸ್ ಎಸ್ ಕಾರ್ಯಕರ್ತರು ಕೂಡ ಗರಂ ಆಗಿದ್ದಾರೆ.
ನಂಜನಗೂಡಿನ ಹುಚ್ಚಗಣಿ ಗ್ರಾಮದಲಿದ್ದ ಪುರಾತನ ಹಿಂದೂ ದೇವಾಲಯವನ್ನು ತೆರವುಗೊಳಿಸಲಾಗಿದ್ದು, ಜಿಲ್ಲಾಡಳಿತದ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ. ದೇವಾಲಯದ ತೆರವಿನಿಂದಾಗಿ ಹಿಂದೂ ಭಾವನೆಗಳಿಗೆ ಧಕ್ಕೆಯಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿನ ಈ ಕ್ರಮ ಖಂಡನೀಯ ಎಂದು ಆರ್ ಎಸ್ ಎಸ್ ಕಾರ್ಯಕತರು ಕಿಡಿಕಾರಿದ್ದಾರೆ. ದೇವಾಲಯ ತೆರವು ಆದೇಶ ವಿಚಾರವಾಗಿ ಆರ್ ಎಸ್ ಎಸ್ ತುರ್ತು ಸಭೆ ಕರೆದಿದ್ದು, ಹಿಂದೂಪರ ಸಂಘಟನೆ ಮುಖಂಡರು ಭಾಗಿಯಾಗಲಿದ್ದಾರೆ.
ದೇವಾಲಯ ತೆರವಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೆ.16ರಂದು ಆರ್ ಎಸ್ ಎಸ್ ಬೃಹತ್ ಹೋರಾಟ ನಡೆಸಲಿದೆ. ಈ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಇನ್ನು, ಪುರಾತನ ಹಿಂದೂ ದೇವಾಲಯ ತೆರವಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ. ತೆರವುಗೊಳಿಸಿದ ದೇವಾಲಯದ ಪುನರ್ ನಿರ್ಮಾಣ ವ್ಯವಸ್ಥೆಯನ್ನು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ