CrimeKarnataka NewsLatest

*ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಮಹಿಳೆ ನೀಡಿದ ದೂರಿನ ಗಂಭೀರತೆಯನ್ನು ಅರಿತು ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ಯಾವುದೇ ವಿಳಂಬ ಮಾಡದೆ ಎಫ್‌ಐಆರ್ ದಾಖಲಿಸಿಕೊಂಡು ಸ್ವಾಮೀಜಿಯನ್ನು ತಮ್ಮ ವಶಕ್ಕೆ ಪದೆದಿದ್ದಾರೆ.

ಬಂಧಿತ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಖಾಕಿ ಪಡೆಯು ಈ ಕುರಿತು ಕಟ್ಟುನಿಟ್ಟಿನ ವಿಚಾರಣೆ ಮತ್ತು ತನಿಖಾ ಪ್ರಕ್ರಿಯೆಯನ್ನು ತೀವ್ರಗೊಳಿಸಿದೆ.

ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ, ವಂಚಿಸಿ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಸ್ವಾಮೀಜಿ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಾಂತ್ರಸ್ತ ಮಹಿಳೆ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ವಾಮೀಜಿಯವರನ್ನು ಬಂಧಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button