ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿಯಿದೆ. ಕಾಂಗ್ರೆಸ್ ಇಂದು ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಘೋಷಿಸಿದೆ.
ಪಿಎಫ್ ಐ ಜೊತೆಗೆ ಬಜರಂಗದಳ ಬ್ಯಾನ್ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವುದು ಬಿಜೆಪಿ ಹಾಗೂ ಬಜರಂಗದಳ, ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಭಿಯಾನ ಆರಂಭಿಸಿದ್ದು, ನಾನೊಬ್ಬ ಬಜರಂಗಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರೊಫೈಲ್ ಬದಲಾಯಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಡಾ.ಅಶ್ವತ್ಥನಾರಾಯಣ, ಸಂಸದ ಪ್ರತಾಪ್ ಸಿಂಹ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಫೇಸ್ ಬುಕ್ ಪ್ರೊಫೈಲ್ ಪಿಕ್ಚರ್ ಬದಲಾಯಿಸಿ ನಾನೊಬ್ಬ ಬಜರಂಗಿ ಅಭಿಯಾನ ಆರಂಭಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ