Latest

ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.

ದಕ್ಷಿನ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು,ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಸಾಧ್ಯತೆ ಇದೆ.

https://pragati.taskdun.com/b-s-yedyurappareactionelection-result/

Related Articles

Back to top button