
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಮರಳಿ ಪಡೆಯುವುದು ಖಚಿತ. ಶ್ರೀಘ್ರದಲ್ಲಿ ಅವರು ಮಂತ್ರಿಯಾಗುತ್ತಾರೆ ಎಂದು ಕ್ರೀಡಾಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ಸುದ್ದಿಗರರೊಂದಿಗೆ ಮಾತನಾಡಿದ ಸಚಿವರು,. ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆಸಿ ಸುಳ್ಳು ಆರೋಪ ಮಾಡಲಾಗಿತ್ತು. ಶೀಘ್ರದಲ್ಲಿಯೇ ಆರೋಪ ಮುಕ್ತರಾಗಲಿದ್ದಾರೆ. ಶೀಘ್ರದಲ್ಲಿ ಅವರು ಸಚಿವರಾಗಲಿದ್ದಾರೆ ಎಂದರು.
ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಇನ್ನೂ 2 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸಿ ಗೆಲ್ಲುತ್ತೇವೆ. ಮತ್ತೆ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನವೂ ಇಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ