
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದಿಂದ ಕೈಗೆತ್ತಿಕೊಳ್ಳಲಾದ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆ ಹಾಗೂ ವಿತರಣಾ ಕಾಲುವೆ ಕಾಮಗಾರಿಗಳಲ್ಲಿ ಲೋಪದೋಷಗಳಿವೆ ಎಂಬ ದೂರಿನ ಹಿನ್ನೆಲೆಯಲ್ಲಿ, ಪರಿಶೀಲಿಸಲು ಸರ್ಕಾರವು ಕಳೆದ ಜೂನ್‍ನಲ್ಲಿ ತಾಂತ್ರಿಕ ತಜ್ಞರ ಸಮಿತಿ ರಚಿಸಿದೆ. ತಾಂತ್ರಿಕ ತಜ್ಞರ ಸಮಿತಿಯ ವರದಿ ಸ್ವೀಕೃತವಾದ ನಂತರ ಪರಿಶೀಲಿಸಿ, ನಿಯಮಾನುಸಾರ ಕ್ರಮ ವಹಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಸದಸ್ಯರಾದ ಟಿ.ಎ.ಶರವಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರ ಒದಗಿಸಿ ಮಾತನಾಡಿದರು.
ಪ್ರಥಮ ಕೃಷ್ಣಾ ನ್ಯಾಯಾಧೀಕರಣದ ಮಧ್ಯಂತರ ತೀರ್ಪಿನಲ್ಲಿ ರಾಜ್ಯಕ್ಕೆ 320 ಟಿಎಂಸಿ ನೀರು ಹಂಚಿಕೆಯಾಗಿದೆ.ಎರಡನೇ ಕೃಷ್ಣಾ ನ್ಯಾಧೀಕರಣದ ತೀರ್ಪಿನಲ್ಲಿ ರಾಜ್ಯಕ್ಕೆ 36 ಟಿಎಂಸಿ ನೀರು ಹಂಚಿಕೆ ಮಾಡಲಾಗಿದ್ದು,ಕೇಂದ್ರ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಬೇಕಾಗಿದೆ.ಅಧಿಸೂಚನೆ ಪ್ರಕಟವಾದ ನಂತರ ಉಳಿದ 36 ಟಿಎಂಸಿ ನೀರಿನ ಬಳಕೆಗೆ ಕ್ರಮವಹಿಸಲಾಗುವುದು ಎಂದರು.
ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಸರ್ವಪಕ್ಷ ಸಭೆಯಲ್ಲಿ ನಿರ್ಣಯ
https://pragati.taskdun.com/construction-of-navali-parallel-reservoir-decided-in-all-party-meeting/
*ಹುಬ್ಬಳ್ಳಿ ಕಿಮ್ಸ್ ರೀತಿಯಲ್ಲಿ ಕೆಲಸ ಮಾಡಿ: ಬಿಮ್ಸ್ ಸಿಬ್ಬಂದಿಗೆ ಪಾಠ ಮಾಡಿದ ಸಿಎಂ ಬೊಮ್ಮಾಯಿ*
https://pragati.taskdun.com/work-like-hubballi-kims-cm-bommai-teaches-bims-staff/
*ಭೀಕರ ಅಪಘಾತ; ಇಬ್ಬರು ಖೋ ಖೋ ಕ್ರೀಡಾಪಟುಗಳು ದುರ್ಮರಣ*
https://pragati.taskdun.com/yadagiritamtam-vehicletractoraccidenttwo-death/