Kannada NewsKarnataka NewsNational

*ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ‌ ಶಿಕ್ಷೆ*

 ಪ್ರಗತಿವಾಹಿನಿ ಸುದ್ದಿ: 2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಶುಕ್ರವಾರ ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ವೀರೇಂದ್ರಸಿನ್ಹ್ ತಾವ್ಡೆ, ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ಅವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಲಾಗಿದೆ.

ಸೆಷನ್ಸ್‌ ನ್ಯಾಯಾಧೀಶ ಪಿ ಪಿ ಜಾಧವ್‌ ಇಂದು ತೀರ್ಪು ಪ್ರಕಟಿಸಿದ್ದಾರೆ. ದೋಷಿಗಳೆಂದು ನ್ಯಾಯಾಲಯದಿಂದ ಘೋಷಿಸಲ್ಪಟ್ಟವರಾದ ಸಚಿನ್‌ ಅಂದೂರೆ ಹಾಗೂ ಶರದ್‌ ಕಲಸ್ಕರ್‌ಗೆ ಜೀವಾವಧಿ ಶಿಕ್ಷೆ ಹಾಗೂ ರೂ 5 ಲಕ್ಷ ದಂಡ ವಿಧಿಸಲಾಗಿದೆ. ಡಾ ವೀರೇಂದ್ರ ಸಿಂಗ್‌ ತಾವಡೆ, ವಿಕ್ರಮ್‌ ಭಾವೆ ಮತ್ತು ಸಂಜೀವ್‌ ಪುನಲೇಕರ್‌ ಅವರನ್ನು ಖುಲಾಸೆಗೊಳಿಸಲಾಗಿದೆ.

Home add -Advt

Related Articles

Back to top button