ಪ್ರವತಿವಾಹಿನಿ ಸುದ್ದಿ: ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನದ ಬಳಿಕ, ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿ ನರೇಂದ್ರ ಮೋದಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸುವ ಮೂಲಕ 17ನೇ ಲೋಕಸಭೆ ವಿಸರ್ಜಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ಮನವಿ ಪತ್ರ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಈ ದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿದ್ದ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ಮನವಿ ಪತ್ರ ಸಲ್ಲಿಸಿದ್ದಾರೆ.
ಅವರ ರಾಜೀನಾಮೆ ಅಂಗೀಕಾರವಾಗಿದ್ದು, ಹೊಸ ಸರ್ಕಾರ ರಚನೆಯಾಗುವವರೆಗೆ ಮೋದಿ ಅವರು ಹಂಗಾಮಿ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಈಗಾಗಲೇ ಸರ್ಕಾರ ರಚನೆಗೆ ಎನ್ಡಿಎಗೆ ಸಂಭಾವ್ಯ ಕಿಂಗ್ ಮೇಕರ್ಸ್ ಟಿಡಿಪಿ ಮತ್ತು ಜೆಡಿಯು ಹಸಿರು ನಿಶಾನೆ ತೋರಿವೆ. ಜೂ.8ರಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ