Cancer Hospital 2
Beereshwara 36
LaxmiTai 5

*ಇಂದು ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಇಂದು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

Emergency Service

ಸಂಜೆ 7.30 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ನರೇಂದ್ರ ಮೋದಿಯವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

ಹಲವು ದೇಶಗಳ ಅಧ್ಯಕ್ಷರೂ ಸೇರಿದಂತೆ ದೇಶವಿದೇಶಗಳ 9 ಸಾವಿರ ಮಂದಿ ಗಣ್ಯರು ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದ ಅಂಗವಾಗಿ ಬಿಗಿಭದ್ರತೆ ನಿಯೋಜಿಸಲಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

Bottom Add3
Bottom Ad 2