Cancer Hospital 2
Beereshwara 36
LaxmiTai 5

ಜೂ.7 ರಂದು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿರುವ ನರೇಂದ್ರ ಮೋದಿ

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸಭೆಯಲ್ಲಿ ಟಿಡಿಪಿ ಹಾಗೂ ಜೆಡಿಯು ಸರ್ಕಾರ ರಚನೆಗೆ ಬೆಂಬಲ ನೀಡಿದ್ದಾರೆ. ಇದರ ಬೆನ್ನಲ್ಲೆ ಪ್ರಧಾನಿ ಮೋದಿ ಅವರು ಜೂ.7 ರಂದು ಸಂಜೆ 5 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲಿದ್ದಾರೆ.

ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆಪಿ ನಡ್ಡಾ ಅವರಿಗೆ ಎಲ್ಲಾ ಮಿತ್ರಪಕ್ಷಗಳೊಂದಿಗೆ ಮಾತನಾಡುವ ಮತ್ತು ಹೊಸ ಸರ್ಕಾರದ ಸ್ವರೂಪದ ಬಗ್ಗೆ ಚರ್ಚಿಸುವ ಜವಾಬ್ದಾರಿಯನ್ನು ನೀಡಲಾಗಿದೆ. 

Emergency Service

ಆಂಧ್ರ ಪ್ರದೇಶದ 25 ಲೋಕಸಭಾ ಕ್ಷೇತ್ರದಲ್ಲಿ ಟಿಡಿಪಿ 16 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. 40 ಕ್ಷೇತ್ರಗಳ ಬಿಹಾರದಲ್ಲಿ ಜೆಡಿಯು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಮೂಲಗಳ ಪ್ರಕಾರ, ಚಂದ್ರಬಾಬು ನಾಯ್ಡು- ನಿತೀಶ್‌ ಕುಮಾರ್‌ ಅವರು ಎನ್‌ಡಿಎ ಮುಂದೆ ತಮ್ಮದೇ ಆದ ಬೇಡಿಕೆಗಳನ್ನು ಇಟ್ಟಿದ್ದಾರೆ. ಟಿಡಿಪಿ 6 ಸಚಿವ ಸ್ಥಾನಗಳ ಜೊತೆಗೆ ಸ್ಪೀಕರ್ ಹುದ್ದೆಗೆ ಬೇಡಿಕೆ ಇಟ್ಟಿದೆ. ಇದೇ ಸಮಯದಲ್ಲಿ, ಜೆಡಿಯು 3 ಸಚಿವ ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.

Bottom Add3
Bottom Ad 2