ಪ್ರಗತಿವಾಹಿನಿ ಸುದ್ದಿ: ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಅಂಗವಾಗಿ ಕಳೆದ ಒಂದೂವರೆ ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಸ್ತ್ರೀಸಬಲೀಕರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು “ಹೆಣ್ಣು – ಪ್ರಗತಿಯ ಕಣ್ಣು” ಎಂಬ ಶೀರ್ಷಿಕೆಯಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಭಿಯಾನ ಕೈಗೊಳ್ಳಲಾಗಿದೆ.
ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ, ಶುಚಿ – ಮುಟ್ಟಿನ ನೈರ್ಮಲ್ಯ ಯೋಜನೆ, ಹೆಣ್ಣು ಭ್ರೂಣ ಹತ್ಯೆ ತಡೆಯಲು ಗರ್ಭಧಾರಣೆಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರಗಳ ಅಧಿನಿಯಮದ ಜಾರಿ, ಅಕ್ಕ ಕೆಫೆ, ಮಾತೃತ್ವ ಸುರಕ್ಷತಾ ಅಭಿಯಾನ, ಕೂಸಿನ ಮನೆ ಮುಂತಾದ ಕಾರ್ಯಕ್ರಮಗಳ ಬಗೆಗಿನ ಮಾಹಿತಿಯನ್ನು ಈ ಅಭಿಯಾನವು ಒಳಗೊಂಡಿದ್ದು, ಇದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನವನ್ನು ರಾಜ್ಯದಲ್ಲಿ ಈ ಒಂದು ದಿನಕ್ಕೆ ಸೀಮಿತವಾಗಿಸದೆ ವರ್ಷವಿಡೀ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂಬುದಕ್ಕೆ ನಿದರ್ಶನವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ