Politics

*ನ್ಯಾಷನಲ್ ಹೆರಾಲ್ಡ್ ಪ್ರಕರಣ; ಡಿ.ಕೆ ಸಹೋದರರಿಗೆ ಮತ್ತೊಂದು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಅವರಿಗೂ ಸಂಕಷ್ಟ ಎದುರಾಗಿದೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರ ಹೆಸರೂ ಕೂಡ ಉಲ್ಲೇಖಿಸಲಾಗಿದೆ. ಯಂಗ್ ಇಂಡಿಯನ್ ಲಿಮಿಟೆಡ್ ಗೆ 2.5 ಕೋಟಿ ಹಣವನ್ನು ಡಿ.ಕೆ ಸಹೋದರರು ದೇಣಿಗೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ

ಈ ಹಿನ್ನೆಲೆಯಲ್ಲಿ ಇಡಿ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಹೆಸರೂ ಇದೆ. ಅಲ್ಲದೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹಾಗೂ ರಾಜ್ಯದ ಇತರ ಕೈ ನಾಯಕರ ಹೆಸರೂ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button