Belagavi NewsBelgaum News

*ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ಪಕ್ಷ ಬುಧವಾರ ಪ್ರತಿಭಟನೆ ಹಮ್ಮಿಕೊಂಡಿದೆ.

ಇವತ್ತು ಬೆಳಿಗ್ಗೆ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಸಿಎಂ, ಡಿಸಿಎಂ, ಸಚಿವರು ಭಾಗವಹಿಸಲಿದ್ದಾರೆ. ನಂತರ ಸದನದಲ್ಲೂ ಈ ಬಗ್ಗೆ ಚರ್ಚೆ ನಡೆಯಲಿದೆ. 

ಬೆಂಗಳೂರಿನ ವಿವಿಧ ಕಡೆಗಳಲ್ಲಿ ಪ್ರತಿಭಟನೆ ಬಡೆಯಲಿದೆ. ಶನಿವಾರ ಪ್ರತ್ಯೇಕ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಹೋರಾಟದಲ್ಲಿ ಭಾಗವಹಿಸಲು  ಡಿಸಿಎಂ ಡಿಕೆಶಿ ಕರೆ ನೀಡಿದ್ದಾರೆ.

Home add -Advt

Related Articles

Back to top button