Kannada NewsKarnataka NewsLatest
ಇನ್ನೂ ಕ್ಲಿಯರ್ ಆಗದ ರಾಷ್ಟ್ರೀಯ ಹೆದ್ದಾರಿ: ಮಂಗಳೂರಿನಿಂದ ತಜ್ಞರಿಂದ ಮುಂದುವರಿದ ಕಾರ್ಯಾಚರಣೆ


ಪ್ರಗತಿವಾಹಿನಿ ಸುದ್ದಿ, ಧಾರವಾಡ : ಬೆಂಗಳೂರು – ಪುಣಾ ರಾಷ್ಟ್ರೀಯ ಬಳಿ ಬಿದ್ದಿರುವ ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.
ಮಂಗಳೂರಿನಿಂದ ತಜ್ಞರು ಆಗಮಿಸಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇನ್ನು ಕೆಲವೇ ಹೊತ್ತಿನಲ್ಲಿ ಕಾರ್ಯಾಚರಣೆ ಪೂರ್ಣಗೊಳ್ಳಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಧ್ಯಕ್ಕೆ ಪರ್ಯಾಯ ಮಾರ್ಗಗಳ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬುಧವಾರ ಸಂಜೆ ಧಾರವಾಡ ಹೈಕೋರ್ಟ್ ಬಳಿ ಅಂಡರ್ ಪಾಸ್ ನಲ್ಲಿ ಗ್ಯಾಸ್ ಟ್ಯಾಂಕರ್ ಬಿದ್ದಿದ್ದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಎರಡೂ ಕಡೆಯಿಂದ ಪರ್ಯಾಯ ಮಾರ್ಗಗಳ ಮೂಲಕ ವಾಹನ ಸಂಚಾರಕ್ಕೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ