Politics

*ಕಾಮಗಾರಿ ಪೂರ್ಣ ಗೊಳಿಸದೇ ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ? ಸಿಎಂ ಖಡಕ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣ ಗೊಳಿಸದೇ ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ, ಇದು ಸರಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2016 ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಸಹ ಇದುವರೆಗೆ ಮುಕ್ತಾಯಗೊಳಿಸದೇ ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವ ರಿಗೂ ದಾರಿತಪ್ಪಿಸುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದು, ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣ ಪತ್ರ ಬರೆಯುವುದಾಗಿ ಹೇಳಿದರು.

ನೀವು ಹೇಳಿದ ಹಾಗೆ ಕೇಳುವುದಕ್ಕೆ ನಾವಿಲ್ಲ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿರುವ ಅಪಾಯಕಾರಿ ಪ್ರದೇಶಗಳಲ್ಲಿನ ಗ್ರಾಮಗಳಲ್ಲಿ ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿಕೊಂಡು ಅಲ್ಲಿನ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದರು

ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಜನರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ನಿರ್ವಹಿಸಬೇಕು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button