Latest

*ರಾಷ್ಟ್ರೀಯ ಹೆದ್ದಾರಿ ಕುಸಿತ; ವಾಹನ ಸಂಚಾರ ಬಂದ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟಕ್ಕೆ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯೇ ಕುಸಿತಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಬಳಿ ನಡೆದಿದೆ.

ಸಕಲೇಶಪುರ ತಾಲೂಕಿನ ಗುಲಗಳಲೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚತುಷ್ಪಥ ರಸ್ತೆಯ ಒಂದು ಬದಿಯೇ ಕುಸಿದು ಹೋಗಿದೆ. ತಡೆಗೋಡೆ ಇಲ್ಲದ ಕಾರಣಕ್ಕೆ ಈ ಅನಾಹುತ ಸಂಭವಿಸಿದೆ.

ಇದೇ ರೀತಿ ಮಳೆ ಮುಂದುವರಿದರೆ ಹೆದ್ದಾರಿಯ ಇನ್ನಷ್ಟು ಭಾಗ ಕುಸಿಯುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಒಂದು ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕಳಪೆ ಕಾಮಗಾರಿ, ಅಸಮರ್ಪಕ ರಸ್ತೆ ನಿರ್ಮಾಣದಿಂದಾಗಿಯೇ ಇಂತಹ ಅವಘಡ ಸಂಭವಿಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

Related Articles

Back to top button