Latest

ಡಿ.ಕೆ.ಶಿವಕುಮಾರ್ ಒಡೆತನದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ಪ್ರತಿಷ್ಠಿತ ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂಡ ಬೆನ್ನಲ್ಲೇ ಇದೀಗ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆಯೊಡ್ಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ನ್ಯಾಷನಲ್ L.U. ಪಬ್ಲಿಕ್ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಸಂದೇಶ ರವಾನಿಸಲಾಗಿದೆ.

ಡಿಕೆಶಿ ಒಡೆತನದ ಖಾಸಗಿ ಶಾಲೆ ಇದಾಗಿದ್ದು, ಸ್ಥಳಕ್ಕೆ ಆರ್.ಆರ್.ನಗರ ಠಾಣೆ ಪೊಲೀಸರು, ಬಾಂಬ್ ಪತ್ತೆ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಮುಂಜಾಗೃತಾ ಕ್ರಮವಾಗಿ ಶಾಲೆಯಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಹೊರಕಳಿಸಿ ಶಾಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಗೋಲ್ ಮಾಲ್; ಎಂ.ಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು

Home add -Advt

Related Articles

Back to top button