Advertisement

24 ಗಂಟೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು ಗೊತ್ತೇ?

ದೇಶದಲ್ಲಿ 5,48,318ಕ್ಕೆ ಏರಿಕೆಯಾದ ಸೋಂಕು ಪೀಡಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 19,459 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 5,48,318ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 380 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ 16,475ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 3,21,723 ಜನ ಮಾತ್ರ. ದೇಶದಲ್ಲಿ ಇನ್ನೂ 2,10,120 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಭಾರತದಲ್ಲಿ ಒಂದೇ ವಾರದಲ್ಲಿ ಒಂದು ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿ ದೇಶದ ಕೊರೋನಾ ಪೀಡಿತರ ಸಂಖ್ಯೆ ಐದು ಲಕ್ಷದ ಗಡಿ ದಾಟಿತ್ತು. ಈಗ ಪ್ರತಿದಿನ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕಾರಿಯಾಗಿದೆ.

ಭಾರತದಲ್ಲಿ ಪ್ರತಿದಿನ ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು,  ಜೂನ್ 17ರಂದು 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 18ರಂದು 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು, ಜೂನ್ 19ರಂದು 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 23ರಂದು 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 24ರಂದು 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 25ರಂದು17 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 26ರಂದು 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಈಗ ಜೂನ್ 27ರಿಂದ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗತೊಡಗಿವೆ.