​ ಸಿಎಂ ಸನ್ಮಾನಕ್ಕೆ ರಾಜನಾಥ್ ಸಿಂಗ್ ಗೆ ಆಹ್ವಾನಿಸಿದ ಶಂಕರಗೌಡ ಪಾಟೀಲ

ಫೆ.27ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ

ಪ್ರಗತಿವಾಹಿನಿ ಸುದ್ದಿ, ನವದೆಹಲಿ-  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಬುಧವಾರ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿದ್ದರು. 
Nirani -Senitiser1
ಇದೇ 27ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಮ್ಮಿಕೊಂಡಿರುವ ಸನ್ಮಾನ ಸಮಾರಂಭಕ್ಕೆ ರಾಜನಾಥ ಸಿಂಗ್ ಅವರಿಗೆ ಶಂಕರಗೌಡ ಪಾಟೀಲ ಅಧಿಕೃತ ಆಹ್ವಾನ ಪತ್ರ ನೀಡಿದರು. ಜೊತೆಗೆ, ಕರ್ನಾಟಕದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಮ್ಮಿಕೊಂಡಿರುವ ಅಭಿವೃದ್ಧಿಪರ ಯೋಜನೆಗಳ ಕುರಿತು ರಾಜನಾಥ ಸಿಂಗ್ ಅವರಿಗೆ ಮಾಹಿತಿ ನೀಡಿದರು. 
ಉತ್ತಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ ರಾಜನಾಥ್ ಸಿಂಗ್ ಅಭಿವೃದ್ಧಿ ಯೋಜನೆಗಳನ್ನು ಮುಂದುವರಿಸುವಂತೆ ಸಲಹೆ ನೀಡಿದರು ಎಂದು ಶಂಕರಗೌಡ ಪಾಟೀಲ ತಿಳಿಸಿದ್ದಾರೆ.