Ghataprabha

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಸ್ವಲ್ಪಮಟ್ಟಿನ ಅನಾರೋಗ್ಯದಿಂದಾಗಿ ಇಂದು ರಾತ್ರಿ 7.30ರ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ವಲ್ಪಮಟ್ಟಿನ ಅನಾರೋಗ್ಯದಿಂದಾಗಿ ಇಂದು ರಾತ್ರಿ 7.30ರ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯ ಡಾ. ಡಿ.ಎಸ್.ರಾಣಾ ತಿಳಿಸಿದ್ದಾರೆ.

ಕೆಲವು ತಪಾಸಣೆಗಳು ನಡೆಯಬೇಕಿದ್ದು ಇಂದು ರಾತ್ರಿ ಆಸ್ಪತ್ರೆಯಲ್ಲೇ ಉಳಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಂಪೂರ್ಣ ಆರೋಗ್ಯಪೂರ್ಣವಾಗಿ ಮರಳಲಿ ಎಂದು ಬೆಳಗಾವಿ ಗ್ರಾಮೀಣ ಶಾಸಕಿ, ಕಾಂಗ್ರೆಸ್ ರಾಜ್ಯ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರಾರ್ಥಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಕೂಡ ಸೋನಿಯಾ ಗಾಂಧಿ ತಪಾಸಣೆ ಮತ್ತು ಸಣ್ಣ ಪುಟ್ಟ ಸಮಸ್ಯೆಗಾಗಿ ಇದೇ ಆಸ್ಪತ್ರೆಗೆ ದಾಖಲಾಗಿದ್ದರು.