Belagavi NewsBelgaum NewsKannada NewsKarnataka News

*ಬೆಳಗಾವಿಯ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ ಅವರಿಗೆ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ ಅವರಿಗೆ ‘ರಾಷ್ಟ್ರೀಯ ಸಮಾಜ ಸೇವಾ ರತ್ನ’ ಪ್ರಶಸ್ತಿ ಲಭಿಸಿದೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನಲ್ಲಿ ನವೆಂಬರ್ 29ರಂದು ನಡೆಯಲಿರುವ ‘ರೈತ ಸಂಭ್ರಮೋತ್ಸವ-2026’ರ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುನ್ನಾ ಬಾಗವಾನ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಚಿರಾಯು ಕನ್ನಡ ವಾಹಿನಿ, ಪ್ರತಿಫಲ ಫೌಂಡೇಶನ್ (ರಿ), ಧಾರವಾಡ ಹಾಗೂ ಅಲೆಯನ್ಸ್ ಇಂಟರ್‌ನ್ಯಾಷನಲ್ ಕ್ಲಬ್ ಆಫ್ ಕರುನಾಡ, ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಕನ್ನಡ ನಾಡು-ನುಡಿ, ನೆಲ-ಜಲ, ಭಾಷೆ, ಸಂಸ್ಕೃತಿ, ಸಂಗೀತ, ಸಾಹಿತ್ಯ, ಕೃಷಿ, ಮಾಧ್ಯಮ, ಶಿಕ್ಷಣ ಹಾಗೂ ಕಲಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಪತ್ರಿಕೋದ್ಯಮದ ಜೊತೆಗೆ ಮುನ್ನಾ ಬಾಗವಾನ ಅವರ ವಿಶಿಷ್ಟ ಸಾಧನೆ ಹಾಗೂ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನವೆಂಬರ್ 29ರಂದು ಬೆಳಿಗ್ಗೆ 9.30ಕ್ಕೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬೆಳಗಾವಿಯ ಪತ್ರಕರ್ತರಿಗೆ ರಾಷ್ಟ್ರಮಟ್ಟದ ಗೌರವ ಲಭಿಸಿರುವುದು ಜಿಲ್ಲೆಯ ಪತ್ರಿಕಾವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ.

Related Articles

Back to top button