Kannada NewsKarnataka NewsLatest

*ಇನ್ಮುಂದೆ ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ನಂದಿನಿ ಉತ್ಪನ್ನ ಬಳಕೆಗೆ ಆದೇಶ*

ಪ್ಲಾಸ್ಟಿಕ್ ಬಾಟಲ್ ಬಳಕೆಗೂ ನಿಷೇಧ

ಪ್ರಗತಿವಾಹಿನಿ ಸುದ್ದಿ: ಇನ್ಮುಂದೆ ಸರ್ಕಾರದ ಯಾವುದೇ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ಕೆ.ಎಂ.ಎಫ್ ನಂದಿನಿ ಉತ್ಪನ್ನಗಳ ತಿನಿಸುಗಳನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರದ ಕಾರ್ಯದರ್ಶಿ ಎಲ್ಲಾ ಇಲಾಖೆ, ಸರ್ಕಾರಿ ಕಚೇರಿಗಳಿಗೂ ಕಟ್ಟುನಿಟ್ಟಿನ ಅಧಿಕೃತ ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ದೃಷ್ಟಿಯಿಂದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಅಲ್ಲದೇ ಕರ್ನಾಟಕ ಸರ್ಕಾರದ ಎಲ್ಲಾ ಕಾರ್ಯಕ್ರಮಗಳು, ಕಚೇರಿಗಳ ಸಭೆ, ಸಮಾರಂಭಗಳಲ್ಲಿ ಕರ್ನಾಟಕ ಮಿಲ್ಕ್ ಫೆಡರೇಶನ್ (KMF) ನ ನಂದಿನಿ ತಿನಿಸುಗಳನ್ನು ಬಳಸುವಂತೆ ನಿರ್ದೇಶನ ನೀಡಲಾಗಿದೆ.

Home add -Advt

Related Articles

Back to top button