Latest

ನಟ ಚೇತನ್ ಬಂಧನಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆ ದಿನಗಳು ಖ್ಯಾತಿಯ ನಟ ಚೇತನ್ ಹೇಳಿಕೆಯನ್ನು ಖಂಡಿಸಿರುವ ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್, ನಟ ಚೇತನ್ ಬಂಧನಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು ಎಂದು ಕಿಡಿಕಾರಿದ್ದಾರೆ.

Home add -Advt

ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಇನ್ನು ನಟ ಚೇತನ್ ಹೇಳಿಕೆ ಖಂಡಿಸಿ ಬ್ರಾಹ್ಮಣ ಸಮುದಾಯ ಅಭಿವೃದ್ಧಿ ಸಂಘದ ಅಧ್ಯಕ್ಷ ಸಚ್ಚಿದಾನಂದ ಅವರು ಕೂಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈ ನಡುವೆ ನಟ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ವಿರೋಧಿ ಬಣಕ್ಕೆ ಸಿಎಂ ಖಡಕ್ ತಿರುಗೇಟು

Related Articles

Back to top button