ಪ್ರಗತಿವಾಹಿನಿ ಸುದ್ದಿ, ಮಾಂಜರಿ:
ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಇಂದು ನೆರೆ ಹಾವಳಿ ಮತ್ತು ಕಟ್ಟಡ ಕುಸಿತ ಮತ್ತು ನೈಸರ್ಗಿಕ ಆಪತ್ತಿನಲ್ಲಿ ಉಂಟಾಗುತ್ತಿರುವ ಸಮಸ್ಯೆ ಹೇಗೆ ಪರಿಹಾರಿಸಿಕೊಳ್ಳಬೇಕು ಎಂದು ಎಸ್.ಡಿ.ಆರ್.ಎಫ್. ತಂಡದಿಂದ ಪ್ರಾತ್ಯಕ್ಷಿಕವನ್ನು ತೋರಿಸಲಾಯಿತು.
ಈ ವೇಳೆ ನೆರೆಹಾವಳಿಯಲ್ಲಿ ಸಿಲುಕಿಕೊಂಡಿರುವ ಜನರನ್ನು ಹೇಗೆ ಬದುಕಿಸಬೇಕು ಮತ್ತು ಕಟ್ಟಡ ಕುಸಿತ ಸಮಯದಲ್ಲಿ ಪರಿಹಾರ ಕಾರ್ಯ ಹೇಗೆ ಕೈಗೊಳ್ಳಬೇಕೆಂದು ಪ್ರಾತ್ಯಕ್ಷಿಕೆಯನ್ನು ತೋರಿಸಲಾಯಿತು.
ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸುಧೀಂದ್ರಕುಮಾರ ರೆಡ್ಡಿ, ಬಾಗಲಕೋಟ ಜಿಲ್ಲಾಧಿಕಾರಿ ಆರ್ ರಾಮಚಂದ್ರನ್, ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಖಾರಿ ಲೊಕೇಶ್ ಜಗಳತಾರ, ಜಿಲ್ಲಾ ಪಂಚಾಯಿತಿ ಸಿಇಓ ಕೆ.ವಿ.ರಾಜೇಂದ್ರ ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.
ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಾಂತ್ಯದ ಮುಖ್ಯ ಅಗ್ನಿಶಾಮಕ ದಳದ ಅಧಿಕಾರಿ ಸಿ.ಬಸವಣ್ಣಾ, ವಿಭಾಗಿಯ ಅಗ್ನಿಶಾಮಕ ದಳ ಅಧಿಖಾರಿ ಶ್ರೀಕಾಂತ, ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಶಿವಕುಮಾರ ಸ್ವಾಮಿ, ಚಿಕ್ಕೋಡಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಪ್ರವಾಹ ಮುನ್ನೆಚ್ಚರಿಕೆ ಕ್ರಮದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬೂದೆಪ್ಪ, ತಹಶೀಲ್ದಾರ ಡಾ.ಸಂತೋಷ ಬಿರಾದಾರ, ಸಿಪಿಐ ಬಸವರಾಜ ಮುಕರ್ತಿಹಾಳ, ಮುಖ್ಯಾಧಿಕಾರಿ ಡಾ.ಸುಂದರ ರೋಗಿ, ಮಹಾವೀರ ಬೋರನ್ನವರ, ಪರಿಮಳಾ ದೇಶಪಾಂಡೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ