
ಪ್ರಗತಿವಾಹಿನಿ ಸುದ್ದಿ: ಪ್ಯಾರಾಲಿಂಪಿಕ್ಸ್ ನ ಪುರುಷರ ಜಾವೆಲಿನ್ ಥ್ರೋ F41 ಇವೆಂಟ್‌ನಲ್ಲಿ ವೈಯಕ್ತಿಕ ಅತ್ಯುತ್ತಮ ಪ್ರದರ್ಶನದೊಂದಿಗೆ ಭಾರತದ ಪ್ಯಾರಾ ಜಾವೆಲಿನ್ ಎಸೆತಗಾರ ನವದೀಪ್ ಚಿನ್ನದ ಪದಕ ಗೆದ್ದಿದ್ದಾರೆ.
ಪ್ಯಾರಾಲಿಂಪಿಕ್ ದಾಖಲೆ ಎಸೆತದೊಂದಿಗೆ ನವದೀಪ್ ಚಿನ್ನದ ಪದಕ ಗೆದ್ದರೆ, ಚೀನಾದ ಸನ್ ಪೆಂಗ್ ಕ್ಸಿಯಾಂಗ್ 44.72 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಬೆಳ್ಳಿ ಪದಕ ಗೆದ್ದರು. ಇನ್ನು ಇರಾಕ್ ನ ವೈಲ್ಡನ್ ನುಖೈಲಾವಿ 40.46 ಮೀಟರ್ ದೂರಕ್ಕೆ ಎಸೆದು ಕಂಚಿನ ಪದಕ ಪಡೆದರು. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚಿನ ಪದಕ ಸೇರಿದಂತೆ 29 ಪದಕಗಳನ್ನು ಗೆದ್ದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ