ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆ ಜೊತೆ ಒಡಿಸ್ಸಾ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಆಡಳಿತ ರೂಢ ಬಿಜೆಡಿಯು ಹೀನಾಯ ಸೋಲನ್ನು ಕಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಹಾಗೂ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ತಮ್ಮ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ.
ಇನ್ನು ರಾಜ್ಯದ ಒಟ್ಟು 147 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು 78 ಸ್ಥಾನಗಳನ್ನು ಗೆದ್ದಿದೆ. ಅತ್ತ ಕಾಂಗ್ರೆಸ್ ಕೇವಲ 14 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತೃಪ್ತಿಪಟ್ಟಿದೆ. ಈ ಮೂಲಕ ಸ್ಪಷ್ಟ ಬಹುಮತ ಸಾಧಿಸಿರುವ ಬಿಜೆಪಿ ಓಡಿಸ್ಸಾದ ಚುಕ್ಕಾಣೆ ಹಿಡಿದಿದೆ.
ವಿಧಾನವ ಸಭೆ ಚುನಾವಣೆಯಲ್ಲಿ ಹಿನಾಯವಾಗಿ ಸೋತ ಹಿನ್ನಲೆ ಭುವನೇಶ್ವರದ ರಾಜಭವನಕ್ಕೆ ತೆರಳಿದ ಪಟ್ನಾಯಕ್, ರಾಜ್ಯಪಾಲ ರಘುಬರ್ ದಾಸ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇನ್ನು ಕಳೆದ ಎರಡು ದಶಕಗಳಿಂದ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರ ಅಧಿಕಾರ ನಿನ್ನೆಯ ವಿಧಾಸಭಾ ಫಲಿತಾಂಶದಿಂದ ಅಂತ್ಯ ಕಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ