Latest

ನವೀನ್ ಗ್ಯಾನಗೌಡರ ಪಾರ್ಥಿವ ಶರೀರ ಆಗಮನ: ಪ್ರಧಾನಿಗೆ ಕರೆಮಾಡಿ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೆರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಅಂತಿಮ ದರ್ಶನ ಪಡೆದು ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಸುಮಾರು ಮೂರು ನಿಮಿಷಗಳ ಕಾಲ ಪ್ರಧಾನಿಯವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿಯವರು, ನವೀನ್ ಪಾರ್ಥಿವ ಶರೀರವನ್ನು ದೇಶಕ್ಕೆ ತರುವಲ್ಲಿ ತಮ್ಮ ಪಾತ್ರ ಮುಖ್ಯವಾಗಿದೆ. ನವೀನ್ ಮುಖ ನೋಡಬೇಕೆಂಬ ಆತನ ತಂದೆ ತಾಯಿಯ ಆಸೆಯನ್ನು ಈಡೇರಿಸಿದ್ದೀರಿ. ಅದಕ್ಕಾಗಿ ರಾಜ್ಯದ ಪರವಾಗಿ ತಮಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Home add -Advt

ಯುದ್ಧಭೂಮಿಯಿಂದ ಮೃತದೇಹ ತರುವುದು ಸುಲಭದ ಮಾತಲ್ಲ. ತಮ್ಮ ಉತ್ತಮ ರಾಜತಾಂತ್ರಿಕ ಬಾಂಧವ್ಯಗಳ ಕಾರಣ ಇದು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related Articles

Back to top button