ಪ್ರಗತಿವಾಹಿನಿ ಸುದ್ದಿ, ನವದೆಹಲಿ – 1988ರಲ್ಲಿ ನಡೆದ ಹಲ್ಲೆ – ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ ಖ್ಯಾತ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜ್ಯೋತ್ ಸಿಂಗ್ ಸಿಧು ಅವರಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಗುರುವಾರ ಈ ಕುರಿತು ತೀರ್ಪು ಹೊರಬಿದ್ದಿದೆ. 34 ವರ್ಷ ಹಳೆಯದಾದ ಈ ಪ್ರಕರಣದಲ್ಲಿ ಗುರ್ ನಾಮ್ ಸಿಂಗ್ ಎನ್ನುವವರು ಸಾವನ್ನಪ್ಪಿದ್ದರು. ರಸ್ತೆಯಲ್ಲಿ ದಾರಿ ಬಿಡುವ ಸಂಬಂಧ ಜಗಳ ವಿಕೋಪಕ್ಕೆ ಹೋಗಿ ಹಲ್ಲೆ ನಡೆದು ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂದು ಆರೋಪಿಸಲಾಗಿತ್ತು.
ಸ್ಥಳೀಯ ನ್ಯಾಯಾಲಯಗಳ ತೀರ್ಪಿನ ಮೇಲ್ಮನವಿ ಹಿನ್ನೆಲೆಯಲ್ಲಿ ಪ್ರಕರಣ ಸುಪ್ರಿಂ ಕೋರ್ಟ್ ವರೆಗೂ ಬಂದಿತ್ತು. ಇದೀಗ ಸುಪ್ರಿಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಸಿಧುಗೆ ಜೈಲು ಶಿಕ್ಷೆ ಖಾಯಂ ಆಗಿದ್ದು, ಯಾವುದೇ ಕ್ಷಣದಲ್ಲಿ ಅವರ ಬಂಧನವಾಗುವ ಸಾಧ್ಯತೆ ಇದೆ.
SSLC: ಬೆಳಗಾವಿಯ 10 ವಿದ್ಯಾರ್ಥಿಗಳು ಸೇರಿದಂತೆ 145 ವಿದ್ಯಾರ್ಥಿಗಳಿಗೆ 625ಕ್ಕೆ 625
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ