Latest

ನವಜೋತ್ ಸಿಂಗ್ ಸಿಧು ಬಂಧನ

ಪ್ರಗತಿವಾಹಿನಿ ಸುದ್ದಿ; ನವದೆಹಲಿ; ಲಖಿಂಪುರ ಹಿಂಸಾಚಾರ ಪ್ರಕರಣ ಖಂಡಿಸಿ ಛಂಡೀಗಢದಲ್ಲಿ ರಾಜ್ಯಪಾಲರ ಭವನದ ಮುಂದೆ ಪ್ರತಿಭಟನೆ ನಡೆಸುತಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹಾಗೂ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದು, ಪ್ರಕರಣ ಸಂಬಂಧ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಸೇರಿದಂತೆ ಹಲವು ಕಾಂಗ್ರೆಸ್ ಶಾಸಕರು, ಪಿವೈಸಿ ಅಧ್ಯಕ್ಷ ಬರಿಂದರ್ ದಿಲ್ಲೋಲ್ ಮತ್ತಿತರರು ಪಂಜಾಬ್ ರಾಜಭವನದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಇದೀಗ ನವಜೋತ್ ಸಿಂಗ್ ಸಿಧು ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ದೇವರ ಪ್ರಸಾದವೆಂದು ಡ್ರಗ್ಸ್ ಮಾರಾಟ; ಎನ್ ಸಿಬಿ ಬಲೆಗೆ ಬಿದ್ದ ಮಾಜಿ ಪೊಲೀಸ್ ಅಧಿಕಾರಿ

Home add -Advt

Related Articles

Back to top button