ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಸಂಸದೆ ನವನೀತ್ ರಾಣಾ ಹಾಗೂ ಶಾಸಕ ರವಿ ರಾಣಾ ದಂಪತಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನವನೀತ್ ರಾಣಾ ಹಾಗೂ ರವಿ ರಾಣಾ ದಂಪತಿಗೆ ಮುಂಬೈ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ರಾಣಾ ದಂಪತಿ ಪರ ವಕೀಲರು ತಿಳಿಸಿದ್ದಾರೆ.
ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸ ಪಠಿಸುವುದಾಗಿ ಹೇಳಿ ಕೋಮು ಗಲಭೆ ಸೃಷ್ಟಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ನವನೀತ್ ರಾಣಾ ಹಾಗೂ ರವಿ ರಾಣಾ ದಂಪತಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ದಂಪತಿಯನ್ನು ಬಂಧಿಸಿದ್ದರು. ಮುಂಬೈ ಕೋರ್ಟ್ ಮೇ 6ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ರಾಣಾ ದಂಪತಿ ಜಾಮೀನಿಗಾಗಿ ವಿಶೇಷ ಕೋರ್ಟ್ ಮೊರೆ ಹೋಗಿದ್ದರು.
ರಾಣಾ ದಂಪತಿ ಪೊಲೀಸ್ ತನಿಖೆಗೆ ಸಹಕರಿಸಬೇಕು. ವಿಚಾರಣೆಗೆ ಕರೆದಾಗ ಹಾಜರಾಗಬೇಕು ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿ ಕೋರ್ಟ್ ಜಾಮೀನು ನೀಡಿದೆ.
ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ