
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದೆ. ನವೋದಯ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ನಡೆದಿದೆ.
17 ಅಮಿತ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಕೂಟುಪೊಳೆ ನದಿಯಲ್ಲಿ ಇಂದು ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ.
ಫೆ.11ರಂದು ಬೆಳಿಗ್ಗೆ ಇಂಗ್ಲೀಷ್ ಪುಸ್ತಕ ತರುವುದಾಗಿ ಹೇಳಿ ಕ್ಲಾಸ್ ರೂಂ ನಿಂದ ಹೊರ ಹೋಗಿದ್ದ ವಿದ್ಯಾರ್ಥಿ ಇದ್ದಕ್ಕಿದ್ದಂತೆ ಕಾಣೆಯಾಗಿದ್ದ. ನಿನ್ನೆ ಕೂಟುಪೊಳೆ ನದಿಯ ದಡದಲ್ಲಿ ಆತನ ಚಪ್ಪಲಿ ಪತ್ತೆಯಾಗಿತ್ತು. ಇಂದು ನದಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.
ನದಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮದಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.