
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಿಸಿದ್ದಾರೆ.
ಮುಂದಿನ ವಾರದಿಂದ ರಾಜ್ಯದೆಲ್ಲೆಡೆ ಪ್ರವಾಸ ಮಾಡಲಿದ್ದೇನೆ. ಈ ಭ್ರಷ್ಟ, ಬೇಜವಾಬ್ದಾರಿ ಕಾಂಗ್ರೆಸ್ ಸರ್ಕಾರ ಕಿತ್ತೂಗೆಯಬೇಕೆಂದು ಪ್ರವಾಸ ಮಾಡಲಿದ್ದೇನೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹಣವಿಲ್ಲದೇ ರಸ್ತೆಯ ಸಣ್ಣ ಗುಂಡಿಯನ್ನೂ ಮುಚ್ಚಲು ಆಗುತ್ತಿಲ್ಲ. ಹೀಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರಿ ಅಭಿವೃದ್ಧಿ ಮಾಡುತ್ತಿರುವುದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.