Latest

ನೌಕಾಪಡೆಯ ಅಧಿಕಾರಿಯನ್ನು ಸಜೀವ ದಹನ ಮಾಡಿದ ದುಷ್ಕರ್ಮಿಗಳು

ಪ್ರಗತಿವಾಹಿನಿ ಸುದ್ದಿ; ಮುಂಬೈ: ನೌಕಾಪಡೆ ಅಧಿಕಾರಿಯೊಬ್ಬರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಬೆಂಕಿಹಚ್ಚಿ ಸಜೀವ ದಹನ ಮಾಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಪಾಲ್ಗಾರ್ ನಲ್ಲಿ ನಡೆದಿದೆ.

ಮೃತ ಅಧಿಕಾರಿಯನ್ನು ಸೂರಜ್ ಕುಮಾರ್ ಎಂದು ಗುರುತಿಸಲಾಗಿದೆ. ರಾಂಜಿ ನಿವಾಸಿಯಾಗಿದ್ದ ದುಬೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ವಿಮಾನ ನಿಲ್ದಾಣದಿಂದಲೇ ದುಷ್ಕರ್ಮಿಗಳು ಅಪಹರಿಸಿದ್ದರು.

ಚೆನೈನಿಂದ ಮಹಾರಾಷ್ಟ್ರದ ಪಾಲ್ಗಾರ್ ಗೆ ಕರೆದೊಯ್ದು 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಹಣ ನೀಡದ ಕಾರಣಕ್ಕೆ ಪಲ್ಗಾರ್ ಜಿಲ್ಲೆಯ ವೇವಾಜಿ ಕಾಡಿನಲ್ಲಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದತ್ತಾತ್ರೆಯ ಶಿಂಧೆ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button