Kannada NewsKarnataka NewsLatest

*ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲಿಸರು ಸುರೇಶ್ ನನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ್ ಸುರೇಶ್, ನಕ್ಸಲ್ ಚಳಿವಟಿಕೆಯಲ್ಲಿ ಭಾಗಿಯಾಗಿದ್ದ. ಕಳೆದ ಹತ್ತು ವರ್ಷಗಳಿಂದ ಭೂಗತನಾಗಿದ್ದ. ಕೆಲ ದಿನಗಳ ಹಿಂದೆ ಚಿಕ್ಕಮಗಳುರು, ಉಡುಪಿ ಭಾಗದಲ್ಲಿ ಮತ್ತೆ ನಕ್ಸಲರ ಚಟುವಟಿಕೆಗಳು ಆರಂಭವಾಗಿದ್ದವು. ಈ ಹಿನ್ನೆಲೆಯಲ್ಲಿ ಪೊಲಿಸರು ಕಟ್ಟೆಚ್ಚರ ವಹಿಸಿದ್ದರು.

Home add -Advt

ಚಿಕ್ಕಮಗಳೂರಿಗೆ ಆಗಮಿಸಿದ್ದ ನಕ್ಲಸ್ ಸುರೇಶ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ದಾಳಿಯಲ್ಲಿ ಗಾಯಗೊಂಡಿದ್ದ ಸುರೇಶ್ ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ.

ಇತ್ತ ಚಿಕ್ಕಮಗಳೂರು ಪೊಲೀಸರು ನಕ್ಸಲ್ ಸುರೇಶ್ ಬಗ್ಗೆ ಸುಳಿವು ನೀಡಿದರೆ 5 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಇದೀಗ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.


Related Articles

Back to top button